ಬೆಂಗಳೂರು: ನಗರ್ತ ಪೇಟೆಯ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆಸೇರಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕ ಮುಕೇಶ್ ಮೇಲೆ ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಿದ್ದನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು.
ಅಂಗಡಿ ಮಾಲೀಕ ಮುಕೇಶ್ ಅವರು ಪ್ರತಿಭಟನಾ ರ್ಯಾಲಿಗೆ ಮುಂದಾಗುತ್ತಿದ್ದಂತೆ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.