ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತವಾಗಿದೆ. ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ
ಹೋಳಿ ಹಬ್ಬವನ್ನು ಪ್ರತೀ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಹೋಳಿ ಹಬ್ಬವು ವಸಂತ ಋತುವಿನ ಆಗಮನವನ್ನು ಸೂಚಿಸುತ್ತದೆ. ಈ ಬಾರಿ ಹೋಳಿಯನ್ನು ಮಾರ್ಚ್ 25 ರಂದು ಆಚರಿಸಲಾಗುತ್ತದೆ. ಹುಣ್ಣಿಮೆ ತಿಥಿಯು ಮಾ. 24 ರಂದು ಬೆಳಿಗ್ಗೆ 09:54ಕ್ಕೆ ಆರಂಭವಾಗಿ, ಮಾ. 25 ರಂದು ಮಧ್ಯಾಹ್ನ 12:29 ಕ್ಕೆ ಕೊನೆಗೊಳ್ಳುತ್ತದೆ.
ಹೋಳಿ ಹಬ್ಬದ ಮಹತ್ವ
ಹಿಂದೂಗಳಲ್ಲಿ ಹೋಳಿ ಹಬ್ಬವು ತನ್ನದೇ ಆದ ಧಾರ್ಮಿಕ ಮಹತ್ವವನ್ನು ಹೊಂದಿದೆ. ಈ ಹಬ್ಬವು ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು ಹಾಗಾಗಿ ಹೋಳಿ ಹಬ್ಬವನ್ನು ಅಪಾರ ಸಂತೋಷ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಹಬ್ಬವನ್ನು ಕೆಲವೆಡೆ ಸತತ ಎರಡು ದಿನಗಳ ವರೆಗೆ ಆಚರಿಸಲಾಗುತ್ತದೆ, ಚೋಟಿ ಹೋಳಿ ಮತ್ತು ಮತ್ತೊಂದು ದಿನ ಬಡಿ ಹೋಳಿ ಅಥವಾ ರಂಗ್ ವಾಲಿ ಹೋಳಿ ಎಂದೂ ಕರೆಯಲಾಗುತ್ತದೆ. ಚೋಟಿ ಹೋಳಿಯಂದು, ಜನರು ದೀಪವನ್ನು ಬೆಳಗಿಸುತ್ತಾರೆ, ನಂತರ ರಾತ್ರಿ ಹೋಲಿಯ ದಹನವನ್ನು ನಡೆಸಲಾಗುತ್ತದೆ. ಹೋಳಿ ಶುದ್ಧಾನುಶುದ್ಧ ಭಾರತೀಯ ಆಚರಣೆ. ಅದರಲ್ಲೂ ಉತ್ತರ ಭಾರತದಲ್ಲಿ ಭಾರೀ ಜನಪ್ರಿಯ. ಆ ಜನಪ್ರಿಯತೆಯ ಕಾರಣದಿಂದಲೇ ಈಗ ಇಡೀ ದೇಶವನ್ನು ಹಬ್ಬಿದ್ದಷ್ಟೇ ಅಲ್ಲದೆ ವಿದೇಶಗಳಲ್ಲೂ ವ್ಯಾಪಿಸಿಕೊಂಡಿದೆ.
ಹೋಳಿಯ ಇತಿಹಾಸ?
ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದನು. ಆತ ದುರಹಂಕಾರಿಯೂ ಹಾಗೂ ಕ್ರೂರಿಯೂ ಆಗಿದ್ದನು. ತಾರಕಾಸುರ ತನಗೆ ಸಾವು ಬರದಿರಲಿ ಎಂದು ತಪಸ್ಸು ಮಾಡಿದ್ದನು. ಆಗ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ. ಆಗ ನನಗೆ ಮರಣ ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಎಂಬ ವರವನ್ನು ಕೇಳಿದ್ದನು. ತಾರಕಾಸುರನ ತಪ್ಪಸ್ಸನ್ನು ಮೆಚ್ಚಿ ಬ್ರಹ್ಮ ವರವನ್ನು ಕೊಡುತ್ತಾನೆ. ಆಗ ತನಗೆ ವರ ಸಿಕ್ಕಿದೆ ಎಂದು ತಾರಕಾಸುರ ಮೆರೆಯುತ್ತಿರುತ್ತಾನೆ.
ಈ ಹಬ್ಬ ಮನೆಯ ಪ್ರತಿಯೊಬ್ಬ ಸದಸ್ಯರನ್ನು ಒಂದುಗೂಡಿಸುತ್ತದೆ ಮತ್ತು ಹಬ್ಬದ ಸಡಗರವನ್ನು ಪ್ರತಿಯೊಬ್ಬರಲ್ಲಿ ತುಂಬುತ್ತದೆ. ಕೆಟ್ಟದ್ದು ಒಳ್ಳೆಯದರ ಮುಂದೆ ತಲೆಬಾಗಲೇಬೇಕು ಎಂಬ ಸಂದೇಶವನ್ನು ಹೋಳಿ ಹಬ್ಬ ಸಾರುತ್ತದೆ. ದುಷ್ಕ್ರತ್ಯಗಳು ದೇವರ ಶಕ್ತಿಯ ಎದುರು ಎಂದಿಗೂ ಜಯವನ್ನು ಪಡೆಯಲು ಸಾಧ್ಯವಿಲ್ಲ ಎಂಬ ಸಾರ ಈ ಹಬ್ಬದ ಹಿಂದಿದೆ. ಹೋಲಿಕನಂತೆ ಕೆಟ್ಟ ಶಕ್ತಿಗಳು, ದುಷ್ಟ ಆಲೋಚನೆಗಳು ನಾಶವಾಗಿ ಹೊಸದರ ಪ್ರಾರಂಭದ ಕಡೆಗೆ ಮನುಷ್ಯರು ಹೋಗುತ್ತಾರೆ.