ಬೆಂಗಳೂರು: ಬೆಂಗಳೂರಿನ ಬೈಕ್ ಸವಾರರು ನೋಡಲೇಬೇಕಾದ ಸ್ಟೋರಿ ಇದು. ಬೆಂಗಳೂರು ಬಿಬಿಎಂಪಿ ದಿವ್ಯ ನಿರ್ಲಕ್ಷ್ಯದಿಂದ ಅಪಾಯ ಯಾವಾಗ ಬೇಕಾದ್ರು ನಿಮ್ಮ ಕಣ್ಮುಂದೆ ಬರಬಹುದು. ಯಾಕಂದ್ರೆ ಬೆಂಗಳೂರಿನಲ್ಲಿ ಘೋರ ದುರಂತ ನಡೆದಿದೆ. ಹೌದು ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.
ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪ ಪ್ರಕರಣ ಸಂಬಂಧ ಖಾಸಗಿ ಶಾಲೆ ಮತ್ತು ಬಿಬಿಎಂಪಿ ವಿರುದ್ಧ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗರಬಾವಿ ನಿವಾಸಿ ಚಂದನ್ ಬೆನ್ನು ಮೂಳೆ ಮುರಿತಕ್ಕೊಳಗಾದ ಬೈಕ್ ಸವಾರ. ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಮಾರ್ಚ್ 7 ರಂದು ಬೆಳಗ್ಗೆ ಕಚೇರಿಗೆ ಹೋಗುತ್ತಿದ್ದರು.
ಈ ವೇಳೆ ರಸ್ತೆಗೆ ಚಾಚುಕೊಂಡಿದ್ದ ಮರದ ಕೊಂಬೆ ಚಂದನ್ ಮೇಲೆ ಮುರಿದು ಬಿದ್ದಿದೆ.ಕೊಂಬೆ ಮೈ ಮೇಲೆ ಬೀಳುತ್ತಿದ್ದಂತೆ ರಸ್ತೆ ಮೇಲೆ ಬಿದ್ದ ಚಂದನ್ನ ಕುತ್ತಿಗೆ ಗಾಯವಾಗಿದೆ. ಅಲ್ಲದೆ, ಬೆನ್ನು ಮೂಳೆ ಮುರಿದಿದೆ. ಏಳೆಂಟು ನಿಮಿಷಗಳ ಕಾಲ ರಸ್ತೆಯಲ್ಲಿ ನರಳಾಡಿದ್ದ ಚಂದನ್ನನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 14 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಂದನ್ಗೆ ಚಿಕಿತ್ಸೆ ನೀಡಲಾಗುತ್ತಿದ್ದಾರೆ. ಈ ನಡುವೆ ಆಶೋಕನಗರ ಪೊಲೀಸರಿಗೆ ಚಂದನ್ ದೂರು ನೀಡಿದ್ದಾರೆ.