ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆದ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಸಂಘಟನೆ ಉಗ್ರರ ದಾಳಿ ವಿಡಿಯೋ ಬಿಡುಗಡೆ ಮಾಡಿದೆ.
ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನಲ್ಲಿ ಸಂಗೀತ ಕಾರ್ಯಕ್ರಮದ ಮೇಲೆ ದಾಳಿ ಮಾಡಿದ ಉಗ್ರರು ಸುಮಾರು 150ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದರು. ಬಂದೂಕುಧಾರಿಗಳು ಚಿತ್ರೀಕರಿಸಿದ ವೀಡಿಯೊವನ್ನು ಜಿಹಾದಿ ಗುಂಪು ಇಸ್ಲಾಮಿಕ್ ಸ್ಟೇಟ್ (ISIS) ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಲಾಗಿದೆ.
ಒಂದೂವರೆ ನಿಮಿಷದ ಈ ವಿಡಿಯೋದಲ್ಲಿ ಮಸುಕುಧಾರಿಗಳು ಘೋಷಣೆ ಕೂಗುತ್ತಾ ಅಸಾಲ್ಟ್ ರೈಫಲ್ಗಳನ್ನು ಮತ್ತು ಚಾಕುಗಳನ್ನು ಹಿಡಿದು ಅಲ್ಲಿ ನೆರೆದಿದ್ದವರ ಮೇಲೆ ದಾಳಿ ನಡೆಸಿದ್ದಾರೆ. ವಿಡಿಯೋದಲ್ಲಿ ದಾಳಿಕೋರರು ಹಲವಾರು ಸುತ್ತು ಗುಂಡುಗಳನ್ನು ಹಾರಿಸುತ್ತಿದ್ದು, ಈ ವೇಳೆ ಸುತ್ತಲಿನ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ರಷ್ಯಾದ ಸೈಟ್ ಮಾನಿಟರಿಂಗ್ ಗ್ರೂಪ್ ವರದಿ ಪ್ರಕಾರ ಈ ವೀಡಿಯೊ ಐಎಸ್ನ ಸುದ್ದಿ ವಿಭಾಗವಾದ ಅಮಾಕ್ ನ ಟೆಲಿಗ್ರಾಮ್ ಖಾತೆಯಲ್ಲಿ ಈ ವಿಡಿಯೋಗಳು ಬಿಡುಗಡೆಯಾಗಿದೆ ಎಂದು ಹೇಳಲಾಗಿದೆ.