ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಪಾಕಿಸ್ಥಾನ ಭಾರತದೊಂದಿಗೆ ತನ್ನ ವ್ಯಾಪಾರ ಸಂಬಂಧ ವನ್ನು ಮತ್ತೆ ಸರಿಪಡಿಸಿಕೊಳ್ಳಲು ಯತ್ನಿಸುತ್ತಿದೆ. ಖುದ್ದು ಪಾಕ್ನ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ಧಾರ್ ಈ ವಿಚಾರವನ್ನು ಪಾಕಿಸ್ಥಾನ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದ್ದಾರೆ.
ಲಂಡನ್ನಲ್ಲಿ ನಡೆದ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಿಶಾಕ್ ಧಾರ್, “ಪಾಕಿಸ್ಥಾನಿ ಉದ್ಯಮಿಗಳಿಗೆ ಭಾರತದ ಜತೆಗೆ ವ್ಯಾಪಾರ ಸಂಬಂಧ ಹೊಂದುವ ಹಂಬಲ ವಿದೆ. ಈ ನಿಟ್ಟಿನಲ್ಲಿ ಆ ಸಂಬಂಧವನ್ನು ಮತ್ತೆ ಸರಿ ಪಡಿಸುವ ಬಗ್ಗೆ ಸರಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ’ ಎಂದಿದ್ದಾರೆ.
2019ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ವ್ಯಾಪಾರ ಸಂಬಂಧವನ್ನು ಪಾಕ್ ತಗ್ಗಿಸಿತ್ತು.