ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದೆ. ಎಲ್ಲಾರು ತಮ್ಮ ದಾಹವನ್ನೂ ತಣಿಸಲು ಪಾನೀಯಗಳ ಮೊರೆಹೋಗುತ್ತಿದ್ದಾರೆ. ಅದೇ ರೀತಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆಎಂಎಫ್ನ ನಂದಿನಿ ಮಜ್ಜಿಗೆಗೆ ಬೇಡಿಕೆ ಅಪಾರ ಪ್ರಮಾಣದಲ್ಲಿ ಹೆಚ್ಚಾಗಿರುವುದು ತಿಳಿದುಬಂದಿದೆ.
ಕರ್ನಾಟಕ ಹಾಲು ಒಕ್ಕೂಟದ ಅಂಕಿಅಂಶಗಳ ಪ್ರಕಾರ, ಫೆಬ್ರವರಿ ತಿಂಗಳಲ್ಲಿ ದಿನಕ್ಕೆ ನಂದಿನಿ ಮಜ್ಜಿಗೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 1,243 ಲೀಟರ್ ಬೇಡಿಕೆ ಇತ್ತು. ಆದರೆ ಮಾರ್ಚ್ನಲ್ಲಿ ದಿನಕ್ಕೆ 4,615 ಲೀಟರ್ಗೆ ಹೆಚ್ಚಾಗಿದೆ. ಇದು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಸದ್ಯ 200 ಮಿ.ಲೀ. ಮಜ್ಜಿಗೆ ಪ್ಯಾಕೆಟ್ಗಳಿಗೆ ಭಾರಿ ಬೇಡಿಕೆ ಇದೆ. ಫೆಬ್ರವರಿಯಲ್ಲಿ ದಿನಕ್ಕೆ ಒಟ್ಟು 6,215 ಪ್ಯಾಕೆಟ್ಗಳು ಮಾರಾಟವಾಗುತ್ತಿದ್ದವು. ಇದು ಮಾರ್ಚ್ನಲ್ಲಿ ದಿನಕ್ಕೆ 23,075 ಪ್ಯಾಕೆಟ್ಗಳಿಗೆ ಏರಿಕೆಯಾಗಿದೆ. ಕೆಎಂಎಫ್ ಅಂಕಿಅಂಶಗಳ ಪ್ರಕಾರ, 2023 ರ ಮಾರ್ಚ್ಗೆ ಹೋಲಿಸಿದರೆ ಮಾರ್ಚ್ 2024 ರಲ್ಲಿ ಮಜ್ಜಿಗೆ ಬೇಡಿಕೆಯು ಶೇ 200 ರ ವರೆಗೆ ಹೆಚ್ಚಾಗಿದೆ. 2023 ರ ಮಾರ್ಚ್ನಲ್ಲಿ, ಮಜ್ಜಿಗೆಯ ಬೇಡಿಕೆಯು ದಿನಕ್ಕೆ 2,830 ಲೀಟರ್ ಆಗಿತ್ತು.