ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಆರ್ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ 6 ವಿಕೆಟ್ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್ಗಳಿಂದ ಜಯ ಸಾಧಿಸಿತು. ಇಂದು ಐಪಿಎಲ್ 2024ರಲ್ಲಿ ಈ ಎರಡು ತಂಡಗಳು ಗೆಲುವಿಗಾಗಿ ಕಾದಾಡಲಿವೆ.
ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಈವರೆಗೆ 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಪಂಜಾಬ್ 17 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಆರ್ಸಿಬಿ 14 ಪಂದ್ಯಗಳಲ್ಲಿ ಜಯಗಳಿಸಿದೆ. ಇಂದಿನ ಪಂದ್ಯವನ್ನು ಗೆಲ್ಲುವ ಗುರಿಯನ್ನು ಪಂಜಾಬ್ ಹೊಂದಿದೆ.
ಆರ್ಸಿಬಿ ಸಂಭಾವ್ಯ ತಂಡ
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಕರಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.
ಇಂಪ್ಯಾಕ್ಟ್ ಪ್ಲೇಯರ್ : ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಮನೋಜ್ ಭಾಂಡಗೆ, ಸುಯ್ಯಶ್ ಪ್ರಭುದೇಸಾಯಿ, ಯಶ್ ದಯಾಳ್.
ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ
ಶಿಖರ್ ಧವನ್ (ನಾಯಕ), ಜಾನಿ ಬೈರ್ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷ್ದೀಪ್ ಸಿಂಗ್.