ಬೆಂಗಳೂರು : ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಲು ಊತ ಜಾಸ್ತಿ ಆಗಿದ್ದ ಕಾರಣ ಜನರಲ್ ಚೆಕಪ್ ಗೆ ಹೋಗಿದ್ದ ದೇವೇಗೌಡರು, ಒಂದು ವಾರ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದು, ವೈದ್ಯರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವೇಗೌಡರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ. ಮಾಜಿ ಪ್ರಧಾನಿ HDD ಬೆಳಗ್ಗೆನೇ ಆಸ್ಪತ್ರೆಗೆ ದಾಖಲಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.