ಬೆಂಗಳೂರು:- ಉಚಿತ ನೀರನ್ನು ಮಾರಾಟ ಮಾಡಿದ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು ದಾಖಲಾಗಿದೆ.
ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದೆ. ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಉಚಿತವಾಗಿ ನೀರು ಪೂರೈಸುವುದಕ್ಕಾಗಿ ಮಂಡಳಿಯು ಖಾಸಗಿ ಟ್ಯಾಂಕರ್ ಅನ್ನು ತಾತ್ಕಾಲಿಕವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು. ಅದರಂತೆ ನೀರು ಪೂರೈಸಲು ಚಾಲಕನಿಗೆ ಸೂಚಿಸಲಾಗಿತ್ತು ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
ವಾರ್ಡ್ ಸಂಖ್ಯೆ 130ರಲ್ಲಿ ನೀರಿನ ತೀವ್ರ ಅಭಾವ ಇರುವುದು ಗೊತ್ತಾಗಿತ್ತು. ಆ ವಾರ್ಡ್ಗೆ ಚಾಲಕ ನೀರು ಸರಬರಾಜು ಮಾಡಬೇಕಾಗಿತ್ತು. ಸೂಚನೆಯನ್ನು ಪಾಲಿಸುವ ಬದಲು ಚಾಲಕ ವಾಣಿಜ್ಯ ಉದ್ದೇಶಕ್ಕಾಗಿ ವಾರ್ಡ್ ಸಂಖ್ಯೆ 14 ರಲ್ಲಿನ ಸಂಸ್ಥೆಗೆ ನೀರನ್ನು ಮಾರಾಟ ಮಾಡಿದ್ದಾರೆ. ಆದ್ದರಿಂದ, ನಾವು ಅವರ ವಿರುದ್ಧ ದೂರು ನೀಡಿದ್ದೇವೆ ಎಂದು ಮಂಡಳಿ ತಿಳಿಸಿದೆ.
ನಗರದಲ್ಲಿನ ನೀರಿನ ಕೊರತೆ ನೀಗಿಸಲು ಹಲವು ಖಾಸಗಿ ಟ್ಯಾಂಕರ್ಗಳನ್ನು ನಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ. ಖಾಸಗಿ ಟ್ಯಾಂಕರ್ಗಳು ನೀರಿನ ದುರ್ಬಳಕೆಯನ್ನು ಮಾಡಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನೀರಿನ ದುರುಪಯೋಗದ ವಿರುದ್ಧ ಎಲ್ಲಾ ಖಾಸಗಿ ಟ್ಯಾಂಕರ್ ಮಾಲೀಕರಿಗೆ ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಎಚ್ಚರಿಕೆ ನೀಡಿದ್ದಾರೆ.