ಬೆಂಗಳೂರು: ವಿರಾಟ್ ಕೊಹ್ಲಿ ಸ್ಫೋಟಕ ಅರ್ಧಶತಕ ಮತ್ತು ಕೊನೆಯಲ್ಲಿ ಕಾರ್ತಿಕ್ (Dinesh Karthik), ಮಹಿಪಾಲ್ ಅವರ ಸಿಕ್ಸರ್ ಬೌಂಡರಿ ನೆರವಿನಿಂದ ಆರ್ಸಿಬಿ (RCB) ತವರಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ಗಳ ರೋಚಕ ಜಯ ಸಾಧಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 177 ರನ್ಗಳ ಕಠಿಣ ಗುರಿಯನ್ನು ಪಡೆದ ಆರ್ಸಿಬಿ ಇನ್ನೂ 4 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 178 ರನ್ ಹೊಡೆದು ಮೊದಲ ಜಯ ದಾಖಲಿಸಿತು.
ಕೊನೆಯ 30 ಎಸೆತಗಳಲ್ಲಿ 59 ರನ್ ಬೇಕಿತ್ತು. 16ನೇ ಓವರ್ನಲ್ಲಿ 12 ರನ್ ಬಂದರೂ ಕೊಹ್ಲಿ 77 ರನ್(49 ಎಸೆತ, 11 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದ ಕಾರಣ ಪಂದ್ಯ ರೋಚಕ ತಿರುವು ಪಡೆದುಕೊಂಡಿತ್ತು. 16.2 ನೇ ಓವರ್ನಲ್ಲಿ ಅನುಜ್ ರಾವತ್ ಎಲ್ಬಿ ಔಟಾಗಿದ್ದರಿಂದ ಪಂದ್ಯ ಪಂಜಾಬ್ ಕಡೆಗೆ ವಾಲಿತ್ತು
ಈ ವೇಳೆ ಜೊತೆಯಾದ ಕಾರ್ತಿಕ್ ಮತ್ತು ಇಂಪ್ಯಾಕ್ಟ್ ಪ್ಲೇಯರ್ ಮಹಿಪಾಲ್ ಮುರಿಯದ 7ನೇ ವಿಕೆಟಿಗೆ ಕೇವಲ 18 ಎಸೆತಗಳಲ್ಲಿ 48 ರನ್ ಜೊತೆಯಾಟವಾಡಿ ಆರ್ಸಿಬಿಗೆ ಗೆಲುವು ತಂದುಕೊಟ್ಟರು. ವಿಕೆಟ್ ಪತನವಾಗುತ್ತಿದ್ದರೂ ಕ್ರೀಸ್ನಲ್ಲಿ ನಿಂತು ಸ್ಫೋಟಕ ಅರ್ಧಶತಕ ಸಿಡಿಸಿದ ಕೊಹ್ಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನಾರದರು.