ಬೆಂಗಳೂರು:- ಅಕ್ರಮ ಆಸ್ತಿ ಗಳಿಕೆ ಆರೋಪದಡಿ ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ ನಡೆಸಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ ಐಶ್ವರ್ಯ ರೆಸಿಡೆನ್ಸಿಯಲ್ನಲ್ಲಿರುವ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಭಾಲ್ಕಿ ಕಾರಂಜಾ ವಿಭಾಗದ ಎಲೆಕ್ಟ್ರಿಕಲ್ ಎಂಜಿನಿಯರ್ ಶಿವಕುಮಾರ್ ಸ್ವಾಮಿ ಅವರಿಗೆ ಸೇರಿದ ಬೀದರ್ ನಗರದ ಅಗ್ರಿಕಲ್ಚರ್ ಕಾಲೋನಿಯಲ್ಲಿರುವ ಮನೆ, ಕಲಬುರಗಿ ನಗರದ ಎಂ.ಬಿ. ಕಾಲೋನಿಯಲ್ಲಿರುವ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ರಾಮನಗರ ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ PDO ಮೇಲೆ ಲೋಕಾಯುಕ್ತ ದಾಳಿ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾ.ಪಂ ರಾಜ್ಯದ ಅತಿ ಶ್ರೀಮಂತ ಪಂಚಾಯತಿ ಎಂಬ ಹೆಗ್ಗಳಿಕೆ ಪಡೆದಿರುವ ಪಂಚಾಯತಿ ಈಗಲ್ಟನ್ ರೆಸಾರ್ಟ್ ನಿಂದ ಪಿಡಿಓ ಯತೀಶ್ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.