ಬೆಂಗಳೂರು:- ರಾಜಧಾನಿ ಬೆಂಗಳೂರು ಉತ್ತರ ವಿಭಾಗದ 290 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ. 50 ಪೊಲೀಸರ ತಂಡ ಏಕಕಾಲಕ್ಕೆ ರಾಜಗೋಪಾಲನಗರ, ಆರ್ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ ವಿವಿಧ ನಗರಗಳಲ್ಲಿ ವಾಸವಾಗಿರುವ ರೌಡಿಶೀಟರ್ ಮನೆಗಳಲ್ಲಿ ಶೋಧ ನಡೆಸಿ, ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.