ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು (Lokayukta) ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಪಾಲಿಕೆ ಮುಖ್ಯ ಎಂಜಿನಿಯರ್ ರಂಗನಾಥ್ಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ರಾಜ್ಯದ 58 ಕಡೆಗಳಲ್ಲಿ 13 ಮಂದಿ ಎಸ್ಪಿಗಳು, 12 ಮಂದಿ ಡಿವೈಎಸ್ಪಿ 25 ಪಿಐ ಸೇರಿದಂತೆ 130 ಅಧಿಕಾರಿಗಳು ದಾಳಿ ನಡೆಸಿದ್ದಾರೆ
ಅಕ್ರಮ ಆಸ್ತಿ ಗಳಿಕೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಗಡಿ ಜಿಲ್ಲೆ ಬೀದರ್ನಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಏಕಕಾಲಕ್ಕೆ ಬೀದರ್ನಲ್ಲಿ ಮೂರು ಕಡೆ ಹಾಗೂ ಕಲಬುರಗಿಯಲ್ಲಿ ಒಂದು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕಾರಂಜಾ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವಕುಮಾರ ಸ್ವಾಮಿಯ ನಿವಾಸಗಳು ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ.
ಬೀದರ್ ನಗರದ ವೀರಭದ್ರೇಶ್ವರ ಕಾಲೋನಿಯ ನಿವಾಸ, ಭಾಲ್ಕಿ ತಾಲೂಕಿನ ನಾಗೂರು ಗ್ರಾಮದ ನಿವಾಸ, ಬೀದರ್ ನಗರದ ಕಾರಂಜಾ ಕಚೇರಿ ಹಾಗೂ ಕಲಬುರಗಿಯ ಹಳೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ.
ಸದ್ಯ ಭಾಲ್ಕಿಯ ಕಾರಂಜಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುವತ್ತಿರುವ ಶಿವಕುಮಾರ್ ಸ್ವಾಮಿ ನಿವಾಸಗಳಲ್ಲಿ ದಾಖಲೆಗಳನ್ನು ತೀವ್ರ ಪರಿಶೀಲನೆ ಮಾಡಲಾಗುತ್ತಿದೆ. ಲೋಕಾಯುಕ್ತ ಎಸ್ಪಿ ಆಂಥೋನಿ ಜಾನ್ ಮರ್ಗಾದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಎಂ.ಎನ್.ಓಲೇಕಾರ ನೇತೃತ್ವದಲ್ಲಿ ಈ ದಾಳಿಯನ್ನು ದಾಳಿ ಮಾಡಲಾಗಿದೆ.