ದಕ್ಷಿಣ ಅಮೆರಿಕ ಖಂಡದ ಎರಡನೇ ಅತಿದೊಡ್ಡ ಆರ್ಥಿಕತೆ ಎನಿಸಿದ ಅರ್ಜೆಂಟೀನಾ ಈಗ ಹಣದುಬ್ಬರದ ಸುಳಿಗೆ ಸಿಲುಕಿ ವಿಲವಿಲ ಒದ್ದಾಡುತ್ತಿದೆ. ಬೆಲೆ ಏರಿಕೆ ಅಲ್ಲಿನ ಜನರನ್ನು ಹೈರಾಣಗೊಳಿಸುತ್ತಿದೆ. ಇಂಥ ಸ್ಥಿತಿಯಲ್ಲಿ ಅರ್ಜೆಂಟೀನಾದ ಜನರು ಸಾಮಾನ್ಯ ಜೀವನ ನಡೆಸುವುದೇ ದುಬಾರಿಯಾಗಿದೆ. ಆರ್ಥಿಕ ಸ್ಥಿತಿಯಿಂದ ಹೈರಾಣಾಗಿರುವ ಸರ್ಕಾರ ಇದೀಗ ಹೊಸ ನಿರ್ಧರವೊಂದನ್ನು ತೆಗೆದುಕೊಂಡಿದೆ.
ಆರ್ಥಿಕವಾಗಿ ಸ್ಥಿರವಾಗಿಲ್ಲದ ಅರ್ಜೆಂಟೀನಾ ಸರ್ಕಾರ ಆರ್ಥಿಕ ಸ್ಥಿತಿ ಸುಧಾರಿಸಲು ಸದ್ಯದಲ್ಲೇ 70 ಸಾವಿರ ಸರ್ಕಾರಿ ನೌಕರರನ್ನು ವಜಾಗೊಳಿಸಲು ನಿರ್ಧರಿಸಿದೆ.
ಈ ಬಗ್ಗೆ ಬ್ಲೂಮ್ಬರ್ಗ್ ವರದಿ ಮಾಡಿದ್ದು, ಅಧ್ಯಕ್ಷ ಜೇವಿಯರ್ ಮಿಲೀ ಈ ಬಗ್ಗೆ ಸುಳಿವು ನೀಡಿದ್ದಾರೆ. ಸರ್ಕಾರಿ ನೌಕರರನ್ನು ವಜಾ ಗೊಳಿಸುವ ಮೂಲಕ ತಮ್ಮ ಆಕ್ರಮಣಕಾರಿ ಕಾರ್ಯತಂತ್ರವನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದೆ. ಮಿಲೀ ಈ ಹೆಜ್ಜೆ ಪ್ರಭಾವಿ ಕಾರ್ಮಿಕ ಸಂಘಗಳಿಂದ ತೀವ್ರ ಪ್ರತಿರೋಧ ಎದುರಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.