ಬೆಂಗಳೂರು:- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಮೂರು ಬಾರಿ ಸಂಸದರಾಗಿದ್ದಾರೆ. ಆದ್ರೆ, ಈ ಬಾರಿ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ.
ಹೀಗಾಗಿ ಬೇಸರದಲ್ಲಿರುವ ಕಟೀಲ್ ಗೆ ಹೈಕಮಾಂಡ್ ಮಹತ್ವದ ಜವಬ್ದಾರಿ ನೀಡಿದೆ.
ಕಟೀಲ್ ರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.
ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್ ಕುಮಾರ್ ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.