ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಅಧಿಕೃತ ಚಾಲನೆ ಸಿಗಲಿದೆ. ಇಂದಿನಿಂದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು.
ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8 ರಂದು ನಾಮಪತ್ರ (ಉಮೇದುವಾರಿಕೆ) ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ರಾಜ್ಯದಲ್ಲಿ ಒಟ್ಟು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭ
ಇಂದು ರಾಜ್ಯದ ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆಶರಂಭವಾಗಲಿದೆ. ಏಪ್ರಿಲ್ 26 ರಂದು ಮೊದಲ ಹಂತದಲ್ಲಿ ಈ 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
- ಚುನಾವಣೆ ಘೋಷಣೆ : ಮಾರ್ಚ್ 16, 2024
- ಅಧಿಸೂಚನೆ ಪ್ರಕಟ : ಮಾರ್ಚ್ 28, 2024
- ನಾಮಪತ್ರ ಸಲ್ಲಿಕೆಗೆ ಕೊನೆ ದಿನ : ಏಪ್ರಿಲ್ 4, 2024
- ನಾಮಪತ್ರ ಪರಿಶೀಲನೆ : ಏಪ್ರಿಲ್ 5, 2024
- ನಾಮಪತ್ರ ವಾಪಸ್ಗೆ ಕೊನೆ ದಿನ : ಏಪ್ರಿಲ್ 8, 2024
- ಮತದಾನ : ಏಪ್ರಿಲ್ 26, 2024
- ಫಲಿತಾಂಶ : ಜೂನ್ 4, 2024