ನವದೆಹಲಿ:- ಚುನಾವಣೆಗೆ ಸ್ಪರ್ಧಿಸಲು ಅಗತ್ಯ ಹಣ ತನ್ನ ಬಳಿ ಇಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ನಾನು ವಾರಗಳವರೆಗೆ ಆಲೋಚನೆ ಮಾಡಿ ನನ್ನ ನಿರ್ಧಾರ ತಿಳಿಸಿದೆ, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ, ನನ್ನ ವಾದವನ್ನು ಅಂಗೀಕರಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ , ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ಸಂಬಳ, ನನ್ನ ಗಳಿಕೆ ಮತ್ತು ನನ್ನ ಉಳಿತಾಯ ನನ್ನದೇ ಹೊರತು ಭಾರತದ ಕನ್ಸಾಲಿಡೇಟೆಡ್ ಫಂಡ್ ಅಲ್ಲ ಎಂದರು. ಏಪ್ರಿಲ್ 19 ರಿಂದ ಪ್ರಾರಂಭವಾಗುವ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಲವಾರು ಅಸ್ತಿತ್ವದಲ್ಲಿರುವ ರಾಜ್ಯಸಭಾ ಸದಸ್ಯರನ್ನು ಕಣಕ್ಕಿಳಿಸಿದೆ. ಇವರಲ್ಲಿ ಪಿಯೂಷ್ ಗೋಯಲ್, ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಮನ್ಸುಖ್ ಮಾಂಡವಿಯಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದ್ದಾರೆ.