ಹೈದರಾಬಾದ್: ಸಿಕ್ಸರ್ ಬೌಂಡರಿಗಳ ಆಟದಲ್ಲಿ ಸನ್ರೈಸರ್ಸ್ ಹೈದಾಬಾದ್ ಮುಂಬೈ ಇಂಡಿಯನ್ಸ್ ವಿರುದ್ಧ 31 ರನ್ಗಳ ಜಯ ಸಾಧಿಸಿದೆ.
ಗೆಲ್ಲಲು 278 ರನ್ಗಳ ಕಠಿಣ ಗುರಿಯನ್ನು ಪಡೆದ ಮುಂಬೈ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 246 ರನ್ ಹೊಡೆದು ಸತತ ಎರಡನೇ ಸೋಲನ್ನು ಅನುಭವಿಸಿತು. ಎರಡು ತಂಡಗಳು ಮೊತ್ತ 500 ರನ್ಗಳ ಗಡಿಯನ್ನು ದಾಟಿದ್ದು ವಿಶೇಷ.
ಮೂರು ದಾಖಲೆ ಸೃಷ್ಟಿ: ಒಟ್ಟು 523 ರನ್ ಸಿಡಿದಿದ್ದು ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲು. ಇಂದಿನ ಪಂದ್ಯದಲ್ಲಿ 31 ಬೌಂಡರಿ, 38 ಸಿಕ್ಸ್ ಸಿಡಿಯಲ್ಪಟ್ಟಿದೆ. ಐಪಿಎಲ್ನಲ್ಲಿ ಇಷ್ಟು ಬೌಂಡರಿ, ಸಿಕ್ಸ್ ಚಚ್ಚುವ ಮೂಲಕ ಮತ್ತೊಂದು ದಾಖಲೆ ಬರೆಯಲಾಗಿದೆ.
ಇಂದಿನ ಪಂದ್ಯದಲ್ಲಿ ಹೈದರಾಬಾದ್ 277 ರನ್ ಹೊಡೆಯುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ತಂಡ ಎಂಬ ಹೆಗ್ಗಳಿಕೆಗೆ ಹೈದರಾಬಾದ್ ಪಾತ್ರವಾಯಿತು. ಈ ಹಿಂದೆ ಅತಿ ಹೆಚ್ಚು ರನ್ ಸಿಡಿಸಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಹೆಸರಿನಲ್ಲಿ ಇತ್ತು. 2013ರಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್ ವಿರುದ್ಧ 5 ವಿಕೆಟ್ ನಷ್ಟಕ್ಕೆ 263 ರನ್ ಹೊಡೆದಿತ್ತು. ಈ ಪಂದ್ಯದಲ್ಲಿ ಕ್ರಿಸ್ ಗೇಲ್ ಔಟಾಗದೇ 175 ರನ್ ಚಚ್ಚಿದ್ದರು.
ಭಾರೀ ದೊಡ್ಡ ಮೊತ್ತವಿದ್ದ ಹಿನ್ನೆಲೆಯಲ್ಲಿ ಆರಂಭದಲ್ಲೇ ರೋಹಿತ್ ಶರ್ಮಾ (Rohit Sharma) ಮತ್ತು ಇಶನ್ ಕಿಶನ್ (Ishan Kishan) ಅಬ್ಬರಿಸಲು ಆರಂಭಿಸಿದರು. ಇಬ್ಬರು 20 ಎಸೆತಗಳಲ್ಲಿ 56 ರನ್ ಚಚ್ಚಿದರು