ನವದೆಹಲಿ: ಹೋಳಿ ಹಬ್ಬಕ್ಕೂ ಮುನ್ನ ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ಖರ್ಗೆ, ‘ಗೃಹಬಳಕೆಯ ಗ್ಯಾಸ್ ಬೆಲೆ 50 ರೂ., ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 350 ರೂ. ಏರಿಕೆಯಾಗಿದೆ.
ಈಗ ಜನರು ಹೋಳಿಗೆ ಖಾದ್ಯಗಳನ್ನು ಹೇಗೆ ಮಾಡಬೇಕೆಂದು ಕೇಳುತ್ತಿದ್ದಾರೆ. ಈ ಲೂಟಿಯ ಆದೇಶಗಳು ಎಷ್ಟು ದಿನ ಮುಂದುವರಿಯುತ್ತದೆ?’ ಎಂದು ಪ್ರಶ್ನಿಸಿದ್ದಾರೆ. ಮೋದಿ ಸರ್ಕಾರದ ಅವಧಿಯಲ್ಲಿ ಅಧಿಕ ಹಣದುಬ್ಬರದಿಂದ ಜನರು ನಲುಗಿ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.