ಕಾಸರಗೋಡು: ಕೇರಳ ಗಡಿಭಾಗದ ಕಾಸರಗೋಡು ಜಿಲ್ಲೆಯ ಗುರಪುರ ಎಂಬಲ್ಲಿ ಬರೋಬ್ಬರಿ 7.25 ಕೋಟಿ ಮೌಲ್ಯದ 2000 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಗಲ್ಫ್ ಉದ್ಯೋಗಿಯಾಗಿರುವ ಕೆಪಿ ಬಾಬು ರಾಜ್ ಎಂಬುವವರ ಮಾಲೀಕತ್ವದ ಮನೆಯಲ್ಲಿ ಪತ್ತೆಯಾಗಿರುವ 2000 ಮುಖಬೆಲೆ ಕೋಟ್ಯಂತರ ರೂಪಾಯಿ ಕಂತೆ ಕಂತೆ ನಕಲಿ ನೋಟುಗಳು.
ಪಾಣತ್ತೂರು ಪಣತ್ತಡಿಯ ಅಬ್ದುಲ್ ರಝಾಕ್ ಎಂಬವರು ಈ ಮನೆಯನ್ನು ಬಾಡಿಗೆಗೆ ನೀಡಿದ್ದರು. ಮನೆಯಲ್ಲಿ ನಿಷೇಧಿತ ನೋಟುಗಳಿರುವುದು ಖಚಿತ ಮಾಹಿತಿ ಪಡೆದಿದ್ದ ಪೊಲೀಸರು. ಈ ಬಗ್ಗೆ ಕಳೆದ ಎರಡುಮೂರು ದಿನಗಳಿಂದ ಮನೆಯ ಮೇಲೆ ಪೊಲೀಸರು ನಿಗಾ ಇಟ್ಟಿದ್ದರು.
ದಾಳಿ ನಡೆಸಿ ಎರಡು ಕೋಣೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಕರೆನ್ಸಿ ನೋಟುಗಳನ್ನು ವಶಕ್ಕೆ ಪಡೆದ ಪೊಲೀಸರು. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿದ್ದ ರಾಜ್ಯ ಸರ್ಕಾರ ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಪತ್ತೆಯಾಗಿರುವುದುಕ ಹಲವು ಅನುಮಾನಗಳನ್ನು ಹುಟ್ಟಿಸಿದೆ.