ಬೆಂಗಳೂರು : ಬೆಂಗಳೂರಿನ ಟೌನ್ಹಾಲ್ನಲ್ಲಿ ಬಹುನಿರೀಕ್ಷಿತ ಬಿಬಿಎಂಪಿ ಬಜೆಟ್ ಇಂದು ಮಂಡನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಿರೀಕ್ಷೆಯಂತೆ ಸರಕಾರದ ಆಣತಿಯಂತೆ ಜನಪರ ಯೋಜನೆಗಳಿಗೆ ಬಜೆಟ್ನಲ್ಲಿ ಆದ್ಯತೆ ನೀಡುವ ಸಾಧ್ಯತೆಗಳು ಹೆಚ್ಚಿವೆ. ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ಇಂದು ಬೆಳಿಗ್ಗೆ 11:30ಕ್ಕೆ ಬಜೆಟ್ ಮಂಡಿಸಲಿದ್ದಾರೆ.
ಸುಮಾರು 10 ಸಾವಿರ ಕೋಟಿ ಆಯವ್ಯಯ ಮಂಡನೆ ಸಾಧ್ಯತೆ ಇದೆ. ವೃದ್ಧರಿಗೆ ಆಶ್ರಯ ನೀಡುವ ಶ್ರವಣ ವಸತಿ ಯೋಜನೆ, ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಕಲ್ಪಿಸಲು ಸಾವಿತ್ರಿಬಾಯಿ ಫುಲೆ ಹೆಸರಲ್ಲಿ ಯೋಜನೆ ಜಾರಿ ಸಾಧ್ಯತೆ. ಇಂದಿರಾ ಕ್ಯಾಂಟೀನ್ ಗೆ ಅನುದಾನ ಮೀಸಲಿಡುವ ಸಾಧ್ಯತೆ ಇದೆ. ಹಾಗೂ ನೂತನ ಫ್ಲೈಓವರ್, ಒಂಟಿ ಮನೆ ಯೋಜನೆ, ಬಿಬಿಎಂಪಿ ಶಾಲಾ ಕಾಲೇಜು ಅಭಿವೃದ್ಧಿ, ನೂತನ ರಸ್ತೆಗೆ ಹಣ ಮೀಸಲು ಬಗ್ಗೆ ಬಜೆಟ್ನಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ.