ಬೆಂಗಳೂರು: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮೊದಲ ಹಂತದಲ್ಲಿ ಏ.26ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೇರಿದಂತೆ ಈವರೆಗೆ 59 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.ಬೆಂಗಳೂರು-ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶಿಸಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಆಟೋದಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಸೌಮ್ಯಾ ರೆಡ್ಡಿ ಅವರಿಗೆ ನಿರ್ಮಾಪಕ ಉಮಾಪತಿ ಸೇರಿ ಹಲವರು ಸಾಥ್ ನೀಡಿದರು. ಬಳಿಕ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಕ್ಷೇತ್ರದ ಪ್ರತಿಯೊಂದು ಭಾಗಕ್ಕೂ ತೆರಳಿ ಪ್ರಚಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಆಸ್ತಿ ವಿವರ…
ಒಟ್ಟು ನಗದು ಹಣ 44135 ರೂಪಾಯಿ
40,96,352 ರೂಪಾಯಿ ಬ್ಯಾಂಕ್ ಡೆಪಾಡಿಟ್
12,48,800 ರೂಪಾಯಿ ಬ್ಯಾಂಕ್ ಸಾಲ
ಸೌಮ್ಯ ರೆಡ್ಡಿ ಬಳಿ ಇದೆ ಒಂದು ಇನೋವಾ ಕಾರ್
5 kg ಬೆಳ್ಳಿ ಹಾಗೂ 950 ಗ್ರಾ ಬಂಗಾರ ಇದೆ
ಇದೆಲ್ಲರದ ಒಟ್ಟು ಚರಾಸ್ತಿ 10,177,145 ಕೋಟಿ
12,826,732 ಕೋಟಿ ಸ್ಥಿರಾಸ್ತಿ ಸೌಮ್ಯ ರೆಡ್ಡಿ ಹೆಸರಲ್ಲಿದೆ