ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಅವರು, ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಲು ಅನುಮತಿ ಕೋರಿದ್ದಾರೆ.
ಈ ವಿಷಯ ಸುಪ್ರೀಂ ಕೋರ್ಟ್ ನಲ್ಲಿರುವುದರಿಂದ ಪರೀಕ್ಷೆ ಸಮಯದಲ್ಲಿ ಹಿಜಾಬ್ ಗೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ, ಈ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿ ಪರೀಕ್ಷೆಗಳನ್ನು ತಪ್ಪಿಸಿಕೊಳ್ಳುತ್ತಾನೆ ಎಂದು ನಾವು ಭಾವಿಸುವುದಿಲ್ಲ. ಎಂದು ಬೆಂಗಳೂರಿನಲ್ಲಿ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.