ಆಸ್ಟ್ರೇಲಿಯಾದಲ್ಲಿ ಭಾರತದ ಪ್ರಜೆಯೊಬ್ಬರು ಪೊಲೀಸರ ಗುಂಡೇಟಿಗೆ ಬಲಿಯಾಗಿರುವ ಘಟನೆ ಸಿಡ್ನಿಯ ರೈಲು ನಿಲ್ದಾಣದಲ್ಲಿ ನಡೆದಿದೆ. ಆತ ರೈಲ್ವೆ ನಿಲ್ದಾಣದಲ್ಲಿ ಕೆಲಸಗಾರರೊಬ್ಬರಿಗೆ ಚೂರಿಯಿಂದ ಇರಿದಿದ್ದ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಎಂದು ಹೇಳಲಾಗಿದೆ. ಭಾರತದ ಕಾನ್ಸುಲೇಟ್ ಜನರಲ್ ಈ ಸಂಬಂಧ ಆಸ್ಟ್ರೇಲಿಯಾದಿಂದ ಸಂಪೂರ್ಣ ವರದಿಯನ್ನು ಕೇಳಿದೆ.
ಮೃತನನ್ನು ಸೈಯದ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಆತ ತಮಿಳುನಾಡಿನ ನಿವಾಸಿ ಎಂದು ಹೇಳಲಾಗಿದೆ. ಮಂಗಳವಾರ ಸಿಡ್ನಿಯ ಆಬರ್ನ್ ರೈಲು ನಿಲ್ದಾಣದಲ್ಲಿ 28 ವರ್ಷದ ಕ್ಲೀನರ್ ಮೇಲೆ ಅಹ್ಮದ್ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ.
ಇದಾದ ಬಳಿಕ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ. ಅದೇ ಸಮಯದಲ್ಲಿ, ಪೊಲೀಸ್ ಅಧಿಕಾರಿ ಮೂರು ಗುಂಡುಗಳನ್ನು ಹಾರಿಸಿದರು, ಅದರಲ್ಲಿ ಎರಡು ಅಹ್ಮದ್ ಎದೆಗೆ ಬಿದ್ದು ಮೃತಪಟ್ಟಿದ್ದಾನೆ.
ಗುಂಡು ಹಾರಿಸುವುದನ್ನು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಇದು ನೋವಿನ ಸಂಗತಿ ಎಂದರು. ನಮ್ಮ ಪೊಲೀಸ್ ಠಾಣೆಯೊಂದರಲ್ಲಿ ಇದೊಂದು ಮಹತ್ವದ ಘಟನೆ. ಈ ಬಗ್ಗೆ ತನಿಖೆ ನಡೆಸಲು ಭಯೋತ್ಪಾದನಾ ನಿಗ್ರಹ ದಳದ ಸಹಾಯವನ್ನೂ ಪಡೆಯಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.