ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹ್ಯಾಟ್ರಿಕ್ ಸೋಲನುಭವಿಸಿದೆ. ತವರಿನಲ್ಲೇ ಮುಂಬೈ (Mumbai Indians) ತಂಡದ ಹೀನಾಯ ಸೋಲು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಇತ್ತ ರಾಜಸ್ಥಾನ್ ರಾಯನ್ಸ್ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 125 ರನ್ಗಳ ಸಾಧಾರಣ ಮೊತ್ತದ ಗುರಿ ನೀಡಿತ್ತು. 126 ರನ್ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 15.3 ಓವರ್ ಇರುವಾಗಲೇ 4 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿ ಸುಲಭ ಜಯ ಸಾಧಿಸಿತು
ಟಾಸ್ ಗೆದ್ದ ಸ್ಯಾಮ್ಸನ್ ಪಡೆ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡ ಕಳಪೆ ಪ್ರದರ್ಶನ ನೀಡಿತು. ಮುಂಬೈ ತಂಡದ ಆರಂಭಿಕ ಆಟಗಾರರು ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ದಾಳಿಗೆ ಧೂಳಿಪಟವಾದರು. ರೋಹಿತ್ ಶರ್ಮಾ, ನಮನ್ ಧೀರ್, ಡೆವಾಲ್ಡ್ ಬ್ರೆವಿಸ್ ಬ್ಯಾಟರ್ಗಳು ಶೂನ್ಯ ಸುತ್ತಿ ಪೆವಿಲಿಯನ್ ಸೇರಿದ್ದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತು.
ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ 21 ಎಸೆತಕ್ಕೆ 34 ರನ್ (6 ಬೌಂಡರಿ) ಗಳಿಸಿದರು. ತಿಲಕ್ ವರ್ಮಾ 32, ಟಿಮ್ ಡೇವಿಡ್ 17, ಇಶಾನ್ ಕಿಶನ್ 16 ರನ್ ಗಳಿಸಿ ತಂಡಕ್ಕೆ ಆಸರೆಯಾದರು.