ಬೆಂಗಳೂರು:- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ