ಕೇರಳ: 2024ರ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಇಂದು ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಮತ್ತೆ ಅದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡ್ನಲ್ಲಿ ರೋಡ್ ಶೋ ನಡೆಸಿ ಸಂಜೆಯ ವೇಳೆಗೆ ದೆಹಲಿಗೆ ಹಿಂದಿರುಗಲಿದ್ದಾರೆ.
ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರು ಈ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಮತ್ತು ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಈ ಕ್ಷೇತ್ರದಲ್ಲಿ ಮೂವರ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಆದಾಗ್ಯೂ, ಅನ್ನಿ ರಾಜಾ ಮತ್ತು ಕೆ ಸುರೇಂದ್ರನ್ಗಿಂತ ರಾಹುಲ್ ಗಾಂಧಿ ಹೆಚ್ಚು ಜನಪ್ರಿಯ ಮುಖ ಎಂದೇ ಹೇಳಬಹುದು.
ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕೆ ಸುರೇಂದ್ರನ್ ಮಾತನಾಡಿ, ರಾಹುಲ್ ಗಾಂಧಿ ಅಂತಿಮವಾಗಿ ವಯನಾಡಿಗೆ ನಾಮಪತ್ರ ಸಲ್ಲಿಸಲು ಬರುತ್ತಿರುವುದು ಒಳ್ಳೆಯದು, ಇವರು ಕ್ಷೇತ್ರದಲ್ಲಿ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.