ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ವಾತಾವರಣವಿರಲಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.