ರಾಜ್ಯದಲ್ಲಿ ರಣ ರಣ ಬಿಸಿಲಿನ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ (ಟೈಮಿಂಗ್) ತಾತ್ಕಾಲಿಕವಾಗಿ ಪರಿಷ್ಕರಣೆ ಮಾಡಲಾಗಿದೆ.
ಏಪ್ರಿಲ್ ,ಮೇ ತಿಂಗಳಲ್ಲಿ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಕಲ್ಬುರ್ಗಿ, ಯಾದಗಿರಿ,ಕೊಪ್ಪಳ,ರಾಯಚೂರು, ಬೀದರ್,ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ.
ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಅಂಗನವಾಡಿ ತೆರೆಯಲು ಸುತ್ತೋಲೆ ಹೊರಡಿಸಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸುತ್ತೋಲೆ ಜಾರಿ ಮಾಡಲಾಗಿದೆ.