ಬೆಂಗಳೂರು:– ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಜೆಡಿಎಸ್ ಪಕ್ಷದಿಂದ ಆಯ್ಕೆಯಾದ ನಗರಸಭೆ ಅಧ್ಯಕ್ಷ ಸೇರಿದಂತೆ 9 ಮಂದಿ ಸದಸ್ಯರು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ತಡರಾತ್ರಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಚನ್ನಪಟ್ಟಣ ನಗರಸಭೆಯ ಅಧ್ಯಕ್ಷ ಪ್ರಶಾಂತ್, ಸದಸ್ಯರಾದ ರೇವಣ್ಣ, ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಲೋಕೇಶ್, ನಾಗೇಶ್, ಸೈಯದ್ ರಫೀಕ್, ಅಭಿದಾಭಾನು, ಭಾನುಪ್ರಿಯಾ ಸೇರಿದಂತೆ ಪಕ್ಷೇತರ ಸದಸ್ಯೆಯಾದ ಉಮಾ ಎಂಬವರು ಬೆಂಗಳೂರಿನ ಡಿಸಿಎಂ ನಿವಾಸದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
ಈ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಿಗ್ ಶಾಕ್ ಕೊಟ್ಟಿದ್ದಾರೆ.
ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್ ಸದಸ್ಯರ ಪೈಕಿ ಮೂರನೇ ಒಂದರಷ್ಟು ಮಂದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ತಮ್ಮನ್ನು ಕಾಂಗ್ರೆಸ್ ಸದಸ್ಯರೆಂದು ಪರಿಗಣಿಸಿ ನಗರಸಭೆಯಲ್ಲಿ ತಮಗೆ ಕಾಂಗ್ರೆಸ್ ಸದಸ್ಯರ ಜೊತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಮೂಲಕ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕರೆಸಿ ಶಕ್ತಿ ಪ್ರದರ್ಶನ ಮಾಡಿದ್ದ ಮೈತ್ರಿ ನಾಯಕರಿಗೆ ಡಿಕೆ ಬ್ರದರ್ಸ್ ಶಾಕ್ ಕೊಟ್ಟಿದ್ದಾರೆ.