ಚೀನಾದ ದಕ್ಷಿಣ ಕ್ಸಿನ್ ಜಿಯಾಂಗ್ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ.
ಭೂಮಿಯ ಮೇಲ್ಮೈಯಿಂದ 24 ಕಿ.ಮೀ (14.91 ಮೈಲುಗಳು) ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಇಎಂಎಸ್ಸಿ ತಿಳಿಸಿದೆ.