ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಲಬುರಗಿಯಲ್ಲಿ 43.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿಯೂ ತುಂಬಾ ಬೆಚ್ಚಗಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್ಎಎಲ್ನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.