ಬೆಂಗಳೂರು: ಕೋಣನಕುಂಟೆಯಲ್ಲಿ ಹೋಟೆಲ್ ಪಕ್ಕದ ಖಾಲಿ ಜಾಗದಲ್ಲಿ ವೀರೇಶ್ ಎಂಬುವವರ ಮೃತದೇಹ ಪತ್ತೆ ಆಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತ ವೀರೇಶ್ ಮೂಲತಃ ರಾಯಚೂರಿನವನು. ಬೆಂಗಳೂರಿನ ಕೋಣನಕುಂಟೆಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. 80 ಅಡಿ ರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ. ಅದೇ ಕಟ್ಟಡದಲ್ಲಿ ವೀರೇಶ್ ಉಳಿದುಕೊಳ್ಳುತ್ತಿದ್ದ.
ಆದರೆ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ. ಘಟನಾ ಸ್ಥಳದಲ್ಲಿ ರಕ್ತ ಕಲೆಗಳು ಪತ್ತೆಯಾಗಿವೆ. ಆದರೆ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲ. ಸ್ಥಳಕ್ಕೆ FSL ಟೀಂ ಕೂಡ ಭೇಟಿ ನೀಡಿ ಪರಿಶೀಲಿಸಿದೆ. ಸದ್ಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಕೋಣನಕುಂಟೆ ಪೊಲೀಸರಿಂದ Crpc 174Cರಡಿ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ.