ಬೆಂಗಳೂರು: ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ಅವಘಡ ಸಂಭವಿಸಿದೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ, ರಸ್ತೆ ಬದಿಗೆ ಕಾರು ನಿಲ್ಲಿಸಿ ಡೋರ್ ತೆಗೆಯುತ್ತಿದ್ದಂತೆ ಕಾರನ್ನು ಹಿಂಬಾಲಿಸಿಕೊಂಡು ಬೈಕ್ನಲ್ಲಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತ ಡೋರ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ.
ಆದರೆ, ಕೆಳಗೆ ಬಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಹಿಂದೆ ಬರುತ್ತಿದ್ದ ಖಾಸಗಿ ಬಸ್ ಕೂಡ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಕೆ.ಆರ್. ಪುರದ ಬೈಕ್ ಸವಾರ ಬಿಜೆಪಿ ಕಾರ್ಯಕರ್ತ ಪ್ರಕಾಶ್ (35) ಎಂದು ಗುರುತಿಸಲಾಗುದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕಾರು ಚಾಲಕ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿ ಬಂದು ಪಕ್ಕದಲ್ಲಿನ ಡೋರ್ ತೆಗೆದಿದ್ದಾನೆ. ಆಗ, ಡೋರ್ ಓಪನ್ ಆಗುತ್ತಿದ್ದಂತೆ ಕಾರಿನ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ಪ್ರಕಾಶ್ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ.