ಬೆಂಗಳೂರು:- ನಗರದಲ್ಲಿ ಬೀದಿ ಬದಿಯಲ್ಲಿ ಆಹಾರ ಮಾರಾಟದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ರಸ್ತೆ ಬದಿಗಳಲ್ಲಿ ಕತ್ತರಿಸಿದ ಹಣ್ಣು ಮತ್ತು ತೆರೆದಿಟ್ಟ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ಗಮನಿಸಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಮಹಾನಗರದ 8 ವಲಯಗಳಿಗೆ ಅನ್ವಯಿಸುವಂತೆ ಈ ಆದೇಶವನ್ನು ಬಿಬಿಎಂಪಿ ಆದೇಶಿಸಿದೆ. ನಗರದಲ್ಲಿ ಕಾಲರಾ ಕಾಣಿಸಿಕೊಳ್ಳುತ್ತಿರುವುದರಿಂದ ಆಯಾ ವಲಯದ ಆರೋಗ್ಯ ಪರಿವೀಕ್ಷಕರು ಹೋಟೆಲ್, ಅಂಗಡಿಗಳನ್ನು ತಪಾಸಣೆ ಮಾಡಬೇಕು. ನೀರಿನ ಗುಣಮಟ್ಟದ ಬಗ್ಗೆ ಪರಿಶೀಲನೆ ಮಾಡಬೇಕು. ಹೋಟೆಲ್ ಗಳಲ್ಲಿ ಬಿಸಿ ನೀರಿನ ವ್ಯವಸ್ಥೆ ಜತೆಗೆ ಸ್ವಚ್ಛವಾಗಿಟ್ಟುಕೊಳ್ಳುವಂತೆ ಹೋಟೆಲ್ ಮಾಲೀಕರಿಗೆ ಸೂಚನೆ ನೀಡುವಂತೆ ತಿಳಿಸಲಾಗಿದೆ.