ಬೆಂಗಳೂರು:- ಇಂದು ರಾಜಧಾನಿ ಬೆಂಗಳೂರು ಸೇರಿ ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಸಿಲಿಕಾನ್ ಸಿಟಿ ಮಂದಿ ಅದ್ದೂರಿಯಾಗಿ ಹಬ್ಬವನ್ನ ಬರಮಾಡಿಕೊಳ್ಳುತ್ತಿದ್ದಾರೆ.
ಹೀಗಾಗಿ ನಗರದ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನಡೆಯುತ್ತಿದ್ದು, ನಗರದ ಗವಿಗಂಗಾಧರ, ಕಾಡುಮಲ್ಲೆಶ್ವರ, ಬನಶಂಕರಿ, ಕೋಟೆ ವೆಂಕಟೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಗವಿಗಂಗಾಧರ ದೇವಸ್ಥಾನದಲ್ಲಿ ಬೆಳ್ಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಪಂಚಾಭಿಷೇಕ, ರುದ್ರಾಭಿಷೇಕ, ಪುಷ್ಪಭಿಷೇಕ ಮಾಡಿ ಮಹಾಭಿಷೇಕ ನಡೆದಿದೆ.
ಮಹಾಭಿಷೇಕದ ನಂತರ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಬಂದು ದೇವರ ದರ್ಶನ ಪಡೆದಿದ್ದಾರೆ. ದೇವಸ್ಥಾನಕ್ಕೆ ಬರುವ ಭಕ್ತದಿಗಳಿಗೆ ರಾತ್ರಿವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜೊತೆಗೆ ಪ್ರಸಾದ ವಿತರಣೆಯ ವ್ಯವಸ್ಥೆ ಕೂಡ ಮಾಡಲಾಗಿದೆ.