ಬೆಂಗಳೂರು:- ರಾಜಧಾನಿ ಬೆಂಗಳೂರಿನ ವೆಂಕಟೇಶ್ವರಪುರದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಭಾವನಿಂದ ಬಾಮೈದನನ್ನು ಹತ್ಯೆ ಮಾಡಿದ ಘಟನೆ ಜರುಗಿದೆ.
ಆರೋಪಿ ಲಕ್ಷ್ಮಣ ಮತ್ತು ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಭಾವ, ಬಾಮೈದನ ನಡುವೆ ಇಂದು ಗಲಾಟೆ ನಡೆದಿದೆ. ಯುಗಾದಿ ಹಬ್ಬದ ಪ್ರಯುಕ್ತ ವೆಂಕಟೇಶ್ವರಪುರದ ಗಲ್ಲಿಯಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ಚಾಕು ಇರಿದು ಕೊಲೆ ಮಾಡಲಾಗಿದೆ. ಕಿರಣ್ ಕುಮಾರ್ ಹತ್ಯೆಗೆ ಲಕ್ಷ್ಮಣ ಮೊದಲೇ ಸಂಚು ರೂಪಿಸಿದ್ದ. ಹಾಗಾಗಿ ಚಾಕು ಇಟ್ಟುಕೊಂಡು ಬಂದಿದ್ದ.
ಇಸ್ಪೀಟ್ ಎಲೆಗಳ ಮೇಲಿದ್ದ ಹಣ ಎತ್ತಲು ಬಗ್ಗಿದಾಗ ಕಿರಣ್ ಕುಮಾರ್ ಬೆನ್ನಿಗೆ ಭಾವ ಲಕ್ಷ್ಮಣ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಕಿರಣ್ ಕುಮಾರ್ನನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಮೈದ ಸಾವನ್ನಪ್ಪಿದ್ದಾನೆ.