ನವದೆಹಲಿ:- ಸಿಎಂಗೆ ಸ್ಪೆಷಲ್ ಟ್ರೀಟ್ಮೆಂಟ್ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ಕೇಜ್ರಿವಾಲ್ ಬಂಧನ ಸರಿ ಇದೆ ಎಂದು ಹೈಕೋರ್ಟ್ ಹೇಳಿದೆ
ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ಗೆ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಇದನ್ನು ವಜಾ ಮಾಡಿದೆ.ಒಂದು ರಾಜ್ಯದ ಮುಖ್ಯಮಂತ್ರಿ ಎನ್ನುವ ಕಾರಣಕ್ಕೆ ಸ್ಪೆಷಲ್ ಟ್ರೀಟ್ಮೆಂಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ
ಇನ್ನು ಚುನಾವಣಾ ಬಾಂಡ್ಅನ್ನು ಯಾರು ಖರೀದಿ ಮಾಡಿದ್ದಾರೆ. ಯಾರು ಮಾಡಿಲ್ಲ ಎನ್ನುವುದು ಈಗ ತನಿಖೆಯ ವಿಚಾರವಲ್ಲ ಎಂದೂ ಹೈಕೋರ್ಟ್ ತೀರ್ಪಿನ ವೇಳೆ ಹೇಳಿದೆ. ಇದೇ ವೇಳೆ ಚುನಾವಣೆಯ ಸಮಯದಲ್ಲಿಯೇ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕೋರ್ಟ್, ‘ಆರೋಪಿಯನ್ನು ಬಂಧನ ಮಾಡಿರುವುದ ಮತ್ತು ರಿಮಾಂಡ್ ಅನ್ನು ಕಾನೂನಿನ ಪ್ರಕಾರ ಪರಿಶೀಲಿಸಬೇಕೇ ಹೊರತು ಚುನಾವಣಾ ಸಮಯದ ಪ್ರಕಾರ ಅಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.