ಬೆಂಗಳೂರು: ಹೊಸತೊಡಕು ಸಂಭ್ರಮಕ್ಕೆ ಎಲ್ಲರನ್ನೂ ಆಹ್ವಾನಿಸಿದ್ದೇನೆ. ಅಲ್ಲೇನು ರಾಜಕೀಯ ಇಲ್ಲ. ಸಮುದಾಯ ಪ್ಲೇ ಕಾರ್ಡ್ ಅನ್ನೋಕೆ ಆಗಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಮೊದಲ ಹಂತದ ಚುನಾವಣಾ ಅಭ್ಯರ್ಥಿಗಳು ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೇವೆ. ಬೆಂಗಳೂರು ನಗರದ 4 ಅಭ್ಯರ್ಥಿಗಳು, ಮೈಸೂರಿನ ಅಭ್ಯರ್ಥಿ, ಕೋಲಾರದ ಅಭ್ಯರ್ಥಿ, ತುಮಕೂರು, ಮಂಡ್ಯದ ನಾನು ಎಲ್ಲಾ ಜೊತೆಗೂಡಿ ಆಶೀರ್ವಾದ ಪಡೆದಿದ್ದೇವೆ.
ವರ್ಷದ ಮೊದಲ ದಿನ ಗುರುಗಳ ಆಶೀರ್ವಾದ ಪಡೆಯೋದು ನಮ್ಮ ಕರ್ತವ್ಯ. ಬಳಿಕ ನಾವೆಲ್ಲ ಒಟ್ಟಾಗಿ ಹೊಸತೊಡಕು ಆಚರಣೆ ಮಾಡುತ್ತೇವೆ ಎಂದರು. ಇನ್ನೂ ಮುಖ್ಯಮಂತ್ರಿಗಳಿಗೆ ಈಗ ಒಕ್ಕಲಿಗರು ಕಾಣುತ್ತಿದ್ದಾರೆ. ಅವರಿಗೆ ಅಸ್ಥಿರತೆ ಕಾಡುತ್ತಿರೋ ಕಾರಣ ಈಗ ಬರುತ್ತಾ ಇದ್ದಾರೆ. ಇವರ ಸರ್ಕಾರದಲ್ಲಿ ಹೇಗೆ ನಡೆಸಿಕೊಂಡಿದ್ದಾರೆ ಅನ್ನೋದು ಗೊತ್ತಿದೆ. ನಾವಿಲ್ಲಿ ಡಿಕೆ ಶಿವಕುಮಾರ್ ರೀತಿ ಟಿವಿ ಕುಕ್ಕರ್ ಕೊಡುವ ಕಾರ್ಯಕ್ರಮ ಅಲ್ಲ. ಜಸ್ಟ್ ಗೆಟ್ ಟು ಗೆದರ್ ಅಷ್ಟೇ ಎಂದು ಹೆಚ್ಡಿಕೆ ಸ್ಪಷ್ಟಪಡಿಸಿದರು.