ಬೆಂಗಳೂರು:- ಕಾರ್ಮಿಕನಿಗೆ ಮೆಟ್ರೋದಲ್ಲಿ ಬಿಡದೆ ಅವಮಾನ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದೆ.
ಏ.7ರಂದು ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಮದ್ಯಸೇವಿಸಿ ಮೆಟ್ರೋದಲ್ಲಿ ಪ್ರಯಾಣಿಸಲು ವ್ಯಕ್ತಿಯೊಬ್ಬ ಮುಂದಾಗಿದ್ದ. ಈ ವೇಳೆ ಮೆಟ್ರೋ ಭದ್ರತಾ ಸಿಬ್ಬಂದಿ ಆತನನ್ನು ತಪಾಸಣೆ ಮಾಡಿದ್ದಾರೆ. ಬಳಿಕ ಆತನಿಂದ ಮದ್ಯದ ವಾಸನೆ ಗಮನಿಸಿ ಪ್ರಯಾಣಿಸದಂತೆ ಹೇಳಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ಕುರಿತು ವ್ಯಕ್ತಿಯ ಬಟ್ಟೆ ಕೊಳಕಾಗಿತ್ತು ಅಥವಾ ಶರ್ಟ್ ಬಟನ್ ಹರಿದಿತ್ತು ಎಂಬ ಕಾರಣಕ್ಕಾಗಿ ಆತನಿಗೆ ಪ್ರಯಾಣ ನಿರಾಕರಿಸಿದೆ ಎನ್ನಲಾಗಿತ್ತು. ಆದರೆ, ಆ ವ್ಯಕ್ತಿ ಮದ್ಯಸೇವಿಸಿದ ಹಿನ್ನೆಲೆ ಪ್ರಯಾಣಿಸಲು ನಿರಾಕರಿಸಿದ್ದಾಗಿ ಮೆಟ್ರೋ ಸ್ಪಷ್ಟನೆ ನೀಡಿದೆ.
ಇತ್ತೀಚಿಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಒಳಗಡೆ ಬಿಡದೆ ಅವಮಾನಿಸಿದ್ದರು. ಬಟ್ಟೆ ಸ್ವಚ್ಛವಾಗಿಲ್ಲ ಎಂಬ ಕಾರಣಕ್ಕೆ ರೈತನನ್ನು ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಆ ಸಿಬ್ಬಂದಿಯ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಬಿಎಂಆರ್ಸಿಎಲ್ ಹೇಳಿತ್ತು. ಇದೀಗ ಅಂತಹುದೇ ಮತ್ತೊಂದು ಘಟನೆ ನಡೆದಿದೆ ಎಂಬ ಊಹಾಪೋಹಗಳಿಗೆ ಬಿಎಂಆರ್ಸಿಎಲ್ ಸ್ಪಷ್ಟನೆ ನೀಡಿದೆ