ಬೆಂಗಳೂರು:- ಬಿಸಿಲಿನ ಬೇಗೆಗೆ ಬಳಲಿ ಬೆಂಡಾಗಿರುವ ಸಿಲಿಕಾನ್ ಸಿಟಿ ಜನರಿಗೆ ಶಾಕ್ ಎದುರಾಗಿದ್ದು, ಬಿಸಿಲಿನ ತಾಪಕ್ಕೆ ಹೀಟ್ ಸ್ಟ್ರೋಕ್ ಪ್ರಕರಣಗಳ ಸಂಖ್ಯೆ ಏರಿಕೆ ಆಗಿದೆ.
ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ದುಪ್ಪಟ್ಟಾಗುತ್ತಿದ್ದು, ಆಸ್ಪತ್ರೆಗಳು ಹೈ ಅಲರ್ಟ್ ಘೋಷಿಸಲಾಗಿದೆ. ಇದಕ್ಕಾಗಿಯೇ ನಗರದ ಕೆಲ ಆಸ್ಪತ್ರೆಗಳಲ್ಲಿ ವಿಶೇಷ ಕೊಠಡಿಗಳ ಸ್ಥಾಪನೆ ಮಾಡಲಾಗಿದೆ. ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಸ್ಪೆಷಲ್ ವಾರ್ಡ್ ಸಿದ್ದವಾಗಿದ್ದು, ಹೀಟ್ ಸ್ಟ್ರೋಕ್ ಹಾಗೂ ಹೀಟ್ ರಿಲೆಟೆಡ್ ರೋಗಿಗಳಿಗೆ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ.
ಒಂದು ವಾರ್ಡ್ ಪ್ರತ್ಯೇಕವಾಗಿ ಹೀಟ್ ಸ್ಟ್ರೋಕ್ ರೋಗಿಗಳಿಗೆ ಮೀಸಲಿಡಲಾಗಿದ್ದು, ಕೆಸಿ ಜನರಲ್ ಆಸ್ಪತ್ರೆಯು ಒಟ್ಟು 10 ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಿದೆ. ORS, ಗ್ಲೂಕೋಸ್ ಸೇರಿದಂತೆ ಇನ್ನಿತರ ಅಗತ್ಯ ಔಷಧಿಗಳ ವ್ಯವಸ್ಥೆ ಮಾಡಲಾಗಿದೆ.