ರಾಜಧಾನಿ ಬೆಂಗಳೂರಿನ ವಾಹನ ಸವಾರರೇ ನಾಳೆ ಹೊರ ಹೋಗೋ ಮುನ್ನ ಹುಷಾರ್ ಆಗಿರಿ. ಸಂಜೆ ಮೇಲೆ ಬೆಂಗಳೂರಿಗೆ ಬೆಂಗಳೂರೇ ಸ್ತಬ್ಧವಾಗಬಹುದು. ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಪಂದ್ಯವಿದೆ. ಅದೂ ಹೈದರಾಬಾದ್ ವಿರುದ್ಧ ಹೈವೋಲ್ಟೇಜ್ ಪಂದ್ಯವಾಗಿದೆ.
ಇನ್ನೂ ನಾಳೆ ಆರ್ಸಿಬಿಯ 7ನೇ ಪಂದ್ಯ ನಡೆಯಲಿದೆ. ಅದೂ ಕೂಡ ನಮ್ಮ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕಣಕ್ಕಿಳಿಯಲಿದೆ. ಈಗಾಗಲೇ ಚಿನ್ನಸ್ವಾಮಿ ಸ್ಟೇಡಿಯಂ ಟಿಕೆಟ್ಗಳು ಸಂಪೂರ್ಣವಾಗಿ ಸೋಲ್ಡ್ ಔಟ್ ಆಗಿದೆ.
ಹೀಗಾಗಿ ಬರೋಬ್ಬರಿ 40 ಸಾವಿರ ಜನ ಏಕಕಾಲದಲ್ಲಿ ಚಿನ್ನಸ್ವಾಮಿ ಮೈದಾನದ ಸುತ್ತಮುತ್ತ ಜಮಾಯಿಸಲಿದ್ದಾರೆ. ಹೀಗಾಗಿ ಚಿನ್ನಸ್ವಾಮಿ ಮೈದಾನದ ಸುತ್ತಲಿನ ಏರಿಯಾಗಳಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇರುತ್ತದೆ. ಇದರಿಂದಾಗಿ ಸಂಜೆ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು. ಅಲ್ಲದೇ ಪಂದ್ಯ ಮುಗಿದ ಬಳಿಕವೂ ಟ್ರಾಫಿಕ್ ಸಮಸ್ಯೆ ಇರಲಿದೆ
ಇನ್ನು, ಬೆಂಗಳೂರಿನ ಎಂಜಿ ರೋಡ್ ನಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹೈದರಾಬಾದ್ ಪಂದ್ಯದ ಹಿನ್ನೆಲೆಯಲ್ಲಿ ಕೆಲವೊಂದ ಸ್ಥಳಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಅಲ್ಲದೇ ಕೆಲವು ರಸ್ತೆಗಳಲ್ಲಿ ಸಂಚಾರವನ್ನೂ ನಿರ್ಬಂಧಿಸಿ ಬೆಂಗಳೂರು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ
ಈ ಸ್ಥಳದಲ್ಲಿ ಪಾರ್ಕಿಂಗ್ ನಿಷೇಧ: ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾಕ್ರ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ಇನ್, ಲ್ಯಾವೆಲ್ಲೆ ರಸ್ತೆ, ವಿಟ್ಲ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ಪಾರ್ಕಿಂಗ್ ಮಾಡಲು ಸಾಧ್ಯವಾಗುವುದಿಲ್ಲ.
ಈ ಮಾರ್ಗಗಳಿಗೆ ಪರ್ಯಾಯವಾಗಿ, ಸೇಂಟ್ ಜೋಸೆಫ್ಸ್ ಇಂಡಿಯನ್ ಸ್ಕೂಲ್ ಗ್ರೌಂಡ್, UB ಸಿಟಿ ಪಾರ್ಕಿಂಗ್. BMTC TTMC ಶಿವಾಜಿ ನಗರ 1 ನೇ ಮಹಡಿ ಮತ್ತು ಹಳೆಯ KGID ಕಟ್ಟಡ ಮತ್ತು ಕಿಂಗ್ಸ್ ರಸ್ತೆ (ಕಬ್ಬನ್ ಪಾರ್ಕ್ ಒಳಗೆ) ನಿಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡಬಹುದಾಗಿದೆ. ಇದಕ್ಕಾಗಿ ನಾಳೆ ಮನೆಯಿಂದ ಹೊರ ಹೋಗುವ ಮುನ್ನ ಒಮ್ಮೆ ಎಚ್ಚರವಹಿಸಿ. ಇಲ್ಲವಾದರೆ ಟ್ರಾಫಿಕ್ ನಲ್ಲಿ ಸಿಲುಕಿಕೊಳ್ಳಬೇಕಾಗುತ್ತದೆ
ಇದರ ನಡುವೆ ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಸಂತಸದ ಸುದ್ದಿ ನೀಡಿದ್ದು, ಐಪಿಎಲ್ ಹಿನ್ನೆಲೆ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ ಮಾಡಲಾಗಿದೆ. ಏಪ್ರಿಲ್ 15ರಂದು ರಾತ್ರಿ 11.30 ರವರೆಗೆ ಮೆಟ್ರೋ ಸೇವೆ ಲಭ್ಯವಾಗಿರಲಿದೆ ಎಂದು ಮೆಟ್ರೋ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.