ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿರುವ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರಾ? ಗಾಯಗೊಂಡಿದ್ರೂ ಯಾರಿಗೂ ಹೇಳದೇ ಪಂದ್ಯವಾಡ್ತಿದ್ದಾರಾ ಅನ್ನೋ ಪ್ರಶ್ನೆ ಮೂಡಿಸಿದೆ
ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೊದಲೆರಡು ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಇನಿಂಗ್ಸ್ನ ಮೊದಲ ಓವರ್ ಎಸೆದಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಗಳಲ್ಲಿ ಪಾಂಡ್ಯ ಒಂದೇ ಒಂದು ಓವರ್ ಬೌಲಿಂಗ್ ಮಾಡಿಲ್ಲ.
ಇದು ಯಾಕೆ ಅನ್ನೋ ಪ್ರಶ್ನೆ ಮೂಡಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ಮೊದಲ ಓವರ್ ಎಸೆದ ಹಾರ್ದಿಕ್ ಪಾಂಡ್ಯ, ಮುಂದಿನ 2 ಪಂದ್ಯಗಳಲ್ಲಿ ಒಂದೇ ಒಂದು ಬೌಲ್ ಮಾಡಲಿಲ್ಲ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ಎಸೆದಿದ್ದು ಕೇವಲ 1 ಓವರ್ ಮಾತ್ರ. ಭುಜದ ನೋವಿನ ಕಾರಣ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಹಿಂದೇಟು ಹಾಕುತ್ತಿದ್ದಾರಾ ಎಂಬ ಪ್ರಶ್ನೆಗಳು ಎದ್ದಿವೆ.
ಈ ಹಿಂದೆ ಕೂಡ ಪಾಂಡ್ಯ ತನ್ನ ತೋಳು ನೋವಿನ ಸಮಸ್ಯೆಯನ್ನು ಮರೆಮಾಚಿ ಟಿ20 ವಿಶ್ವಕಪ್ 2021ರ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಈಗಲೂ ಹೀಗೆ ಮಾಡುತ್ತಿದ್ದಾರಾ ಅನ್ನೋ ಪ್ರಶ್ನೆ ಎದ್ದಿದೆ.
ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಹಾರ್ದಿಕ್ ಪಾಂಡ್ಯ ಆಲ್ರೌಂಡರ್ ಆಗಿ ತಮ್ಮ ಕ್ಷಮತೆಯನ್ನು ಸಾಬೀತುಪಡಿಸಬೇಕಿದೆ. ಹೀಗಾಗಿ ನೋವನ್ನು ಮರೆಮಾಚುತ್ತಿದ್ದಾರೆ ಅಂತ ಅಭಿಮಾನಿಗಳು ತಿಳಿದುಕೊಂಡಿದ್ದಾರೆ.