ಉತ್ತರ ಪ್ರದೇಶ :- ಅಧಿಕಾರಕ್ಕೆ ಬಂದ್ರೆ ಪಶ್ಚಿಮ ಉತ್ತರ ಪ್ರದೇಶವನ್ನು ಪ್ರತ್ಯೇಕ ರಾಜ್ಯವಾಗಿ ಮಾಡ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಮ್ಮ ಪಕ್ಷ ಕೆಲಸ ಮಾಡುವುದರಲ್ಲಿ ನಂಬಿಕೆ ಇಟ್ಟಿದೆ ಹಾಗಾಗಿ ಪ್ರಣಾಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮಾಯಾವತಿ ಹೇಳಿದರು.
ಉತ್ತರ ಪ್ರದೇಶದಲ್ಲಿ ನನ್ನ ನೇತೃತ್ವದಲ್ಲಿ 4 ಬಾರಿ ಸರ್ಕಾರ ರಚನೆಯಾಗಿದೆ, ನಮ್ಮ ಸರ್ಕಾರದಲ್ಲಿ ಯಾವುದೇ ಕೋಮುಗಲಭೆಗಳು ಇರಲಿಲ್ಲ, ಆದರೆ ಎಸ್ಪಿ ಸರ್ಕಾರದಲ್ಲಿ, ಜಾಟ್ ಮತ್ತು ಮುಸ್ಲಿಂ ಸಮುದಾಯಗಳನ್ನು ಪರಸ್ಪರ ಹೊಡೆದಾಡುವಂತೆ ಮಾಡಲಾಯಿತು.
ಇಲ್ಲಿ ತೀರಾ ಹಿಂದುಳಿದ ಸಮುದಾಯದ ಒಬ್ಬರಿಗೆ ಟಿಕೆಟ್ ನೀಡಿ ಈ ಸ್ಥಳದಲ್ಲಿ ಮುಸ್ಲಿಂ ಸಮುದಾಯ ಮತ್ತು ಜಾಟ್ ಸಮುದಾಯದ ನಡುವೆ ಭಾಂದವ್ಯ ಮೂಡಿಸಿದ್ದೇವೆ. ನಾನು ಮುಜಾಫರ್ನಗರದಿಂದ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಯಸಿದ್ದೆ ಆದರೆ ಮುಸ್ಲಿಂ ಸಮುದಾಯದಿಂದ ಯಾರೂ ಸ್ಪರ್ಧಿಸಲು ಸಿದ್ಧರಿರಲಿಲ್ಲ.
2024 ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಮಾಯಾವತಿ ಅವರ ಮೊದಲ ರ್ಯಾಲಿ ಇದಾಗಿದ್ದು, ಈ ರ್ಯಾಲಿಯ ಮೂಲಕ ಅವರು ವಿರೋಧ ಪಕ್ಷಗಳನ್ನು ಗುರಿಯಾಗಿಸಿದ್ದಾರೆ. ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಪಕ್ಷದ ಪರವಾಗಿ ಚುನಾವಣಾ ರ್ಯಾಲಿಗಳಲ್ಲಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.