ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಸೆಣಸಾಡಲಿದೆ.
ಪಂದ್ಯ ನಡೆಯುವ ಹಿನ್ನೆಲೆ, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್ಗೆ ಎಲ್ಲೆಲ್ಲಿ ಅವಕಾಶವಿದೆ? ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂಬುದನ್ನು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಸಂಚಾರ ನಿರ್ಬಂಧ, ಪಾರ್ಕಿಂಗ್ ನಿರ್ಬಂಧ ಹಾಗೂ ಪರ್ಯಾಯ ಪಾರ್ಕಿಂಗ್ ಸ್ಥಳಗಳ ಕುರಿತಾದ ಮಾರ್ಗಸೂಚಿ ಇಂದು ಮಧ್ಯಾಹ್ನ 3:00 ರಿಂದ ರಾತ್ರಿ 11:00 ರವರೆಗೆ ಜಾರಿಯಲ್ಲಿರಲಿದೆ.
ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ?
ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ಮತ್ತು ರಾಜಭವನ ರಸ್ತೆ
ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೇದಿಕೆ ರಸ್ತೆ, ಟ್ರಿನಿಟಿ ಜೆಎನ್, ಲಾವೆಲ್ ರಸ್ತೆ
ವಿಟ್ಟಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ, ನೃಪತುಂಗ ರಸ್ತೆ
ಎಲ್ಲೆಲ್ಲಿ ಪಾರ್ಕಿಂಗ್ ಮಾಡಬಹುದು?
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯದ ದೃಷ್ಟಿಯಿಂದ ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸಂಚಾರ ನಿರ್ಬಂಧ, ಪಾರ್ಕಿಂಗ್ ವ್ಯವಸ್ಥೆ ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲಾಗಿದೆ
ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಗ್ರೌಂಡ್, ಯುಬಿ ಸಿಟಿ ಪಾರ್ಕಿಂಗ್
ಬಿಎಂಟಿಸಿ ಟಿಟಿಎಂಸಿ ಶಿವಾಜಿನಗರ 1 ನೇ ಮಹಡಿ ಮತ್ತು ಹಳೆಯ ಕೆಜಿಐಡಿ ಕಟ್ಟಡ
ಕಿಂಗ್ಸ್ ರಸ್ತೆ