ರಾಯ್ಪುರ್: ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾಪಡೆ ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದಂತೆ 29 ನಕ್ಸಲರ ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಯ ಐಜಿ ಬಸ್ತಾರ್ ಪಿ ಸುಂದರರಾಜ್ ತಿಳಿಸಿದ್ದಾರೆ.
ಮಾದ್ ಪ್ರದೇಶದಲ್ಲಿ ಭದ್ರತಾಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರು ಯೋಧರು ಗಾಯಗೊಂಡಿದ್ದಾರೆ. ಇದುವರೆಗೆ 29 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ನಕ್ಸಲ್ ನಾಯಕನ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಇನ್ನೂ ಎನ್ಕೌಂಟರ್ ನಡೆಯುತ್ತಿದೆ. ಸ್ಥಳದಲ್ಲಿ ಹಲವು ಸ್ಫೋಟಕ ವಸ್ತುಗಳು ಸೇರಿದಂತೆ ಎಕೆ 47 ಬಂದೂಕನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಐಕೆ ಎಲೆಸೆಲಾ ತಿಳಿಸಿದ್ದಾರೆ. ಕಂಕರ್ ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಮತದಾನವನ್ನು ಶಾಂತಯುತವಾಗಿ ನಡೆಸಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ.