ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಅಂತ್ಯಕ್ರಿಯೆ ಏ.17ರಂದು ಬೆಂಗಳೂರಿನ ಟಿ ಆರ್ ಮಿಲ್ ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ. ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ಚಿತೆಗೆ ಅಗ್ನಿಸ್ಪರ್ಷ ಮಾಡಿದರು.
ಇಂದು ದ್ವಾರಕೀಶ್ ಕುಟುಂಬಸ್ಥರಿಂದ ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ರುದ್ರಭೂಮಿಯಲ್ಲಿ ಕುಟುಂಬಸ್ಥರು ಪೂಜೆ ಪೂಜೆ ಸಲ್ಲಿಸಿದ್ದು, 9ಕ್ಕೆ ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಲಿದ್ದಾರೆ.
ಏ.16 ಬೆಳಗ್ಗೆ ದ್ವಾರಕೀಶ್ ಅವರು ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದರು. ಕನ್ನಡ ಚಿತ್ರೋದ್ಯಮದ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದರು. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಟಾರ್ ರಜನಿಕಾಂತ್, ಸುದೀಪ್, ಯಶ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ದ್ವಾರಕೀಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಕಲಾವಿದರು, ಅಭಿಮಾನಿಗಳು, ಗಣ್ಯರ ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನ ಚಾಮರಾಜ ಪೇಟೆಯಲ್ಲಿರುವ ಹಿಂದೂರುದ್ರಭೂಮಿಗೆ ರವಾನಿಸಲಾಯಿತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ಐವರು ಪುತ್ರರೂ ಸೇರಿ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.