ಬೆಂಗಳೂರು:- ಹವಮಾನ ಇಲಾಖೆಯು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಎಚ್ಎಎಲ್ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.