ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏಪ್ರಿಲ್ 19) ನಡೆಯುತ್ತಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು,
1625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಲೋಕಸಭೆಯ 102 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. 21 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದೆ. ಕಾಂಗ್ರೆಸ್ ಮುಖಂಡರಾದ ಕಮಲ್ ನಾಥ್, ನಕುಲ್ ನಾಥ್ ಹಾಗೂ ಅವರ ಕುಟುಂಬಸ್ಥರು ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಸತ್ಯಕ್ಕೆ ಜಯ ಸಿಗಲಿದೆ ಎಂದರು.