ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಇಂದು ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ ನಡೆಯುತ್ತಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಶುರುವಾಗಿದ್ದು, ಎಲ್ಲೆಡೆ ಜನರಲ್ಲಿ ಉತ್ಸಾಹ ಕಂಡುಬಂದಿದೆ.
ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾನಕ್ಕೆ ಕರೆಕೊಟ್ಟಿದ್ದಾರೆ. ಎಕ್ಸ್ ಮೂಲಕ ತಮಿಳಿನಲ್ಲಿ ಸಂದೇಶ ನೀಡಿರುವ ಪ್ರಧಾನಿ ಮೋದಿ, ಲೋಕಸಭೆ ಚುನಾವಣೆ 2024 ಇಂದಿನಿಂದ ಆರಂಭವಾಗಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ 102 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು,
ಈ ಕ್ಷೇತ್ರಗಳಲ್ಲಿರುವ ಎಲ್ಲ ಮತದಾರರು ದಾಖಲೆ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸುವಂತೆ ನಾನು ವಿನಂತಿಸುತ್ತೇನೆ. ವಿಶೇಷವಾಗಿ ಯುವಕರು ಮತ್ತು ಮೊದಲ ಬಾರಿಗೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡುತ್ತೇನೆ. ಏಕೆಂದರೆ ಪ್ರತಿ ಮತವೂ ಪ್ರತಿ ಧ್ವನಿಯೂ ಮುಖ್ಯ ಎಂದು ಬರೆದುಕೊಂಡಿದ್ದಾರೆ.